ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ಶುಕ್ರವಾರ ಭೀಕರ ಕಾರು ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮಲ್ಲಮ್ಮ (26), ಸರೋಜಮ್ಮ (25) ಹಾಗೂ ಒಂದು ಪುಟ್ಟ ಮಗು ಮೃತ ದುರ್ದೈವಿಗಳು. ಮೃತರೆಲ್ಲರೂ ಯಾದಗಿರಿ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಯ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.
