ಲಕ್ಷ್ಮೇಶ್ವರ:ಯಳವತ್ತಿ ಬಸ್ ನಿಲ್ದಾಣದ ಒಳಗೆ ಹೋಗಿ ಕುಳಿತುಕೊಳ್ಳಬೇಕೆಂದರೆ ಪ್ರಯಾಣಿಕರು ಜೀವ ಭಯದಲ್ಲಿ ಕುಳಿತುಕೊಳ್ಳಬೇಕಾದ ಪರಸ್ಥಿತಿ ನಿರ್ಮಾಣವಾಗಿದೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಯಳವತ್ತಿ ಗ್ರಾಮದ ಬಸ್ ನಿಲ್ದಾಣದ ಮೇಲ್ಚಾವಣಿಯು ಉದುರಿ ಬೀಳುತ್ತಿದ್ದು ಬೀಳುವ ಹಂತ ತಲುಪಿದೆ.ಈ ಬಸ್ ನಿಲ್ದಾಣದ ಒಳಗೆ ಸಾರ್ವಜನಿಕರು ಕುಳಿತ ಸಮಯದಲ್ಲಿ ಆಕಸ್ಮಿಕವಾಗಿ ಈ ಮೇಲ್ಚಾವಣಿ ಕುಸಿದು ಬಿದ್ದು ಅನಾಹುತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಈ ಬಸ್ ನಿಲ್ದಾಣದ ಮೇಲ್ಚಾವಣಿ ಕುಸಿದು ಬಿದ್ದು ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ವರದಿ:ಚಂದ್ರಶೇಖರ ಸೋಮಣ್ಣವರ
