ಯಲಬುರ್ಗಾ:ಬೇವೂರು ಪೊಲೀಸ್ ಠಾಣೆಯಲ್ಲಿ ನೂತನ ಪಿಎಸ್ಐ ಎಸ್.ಪಿ.ನಾಯ್ಕ ಶುಕ್ರವಾರ ಅಧಿಕಾರ ಸ್ವೀಕರಿಸಿದರು.ಎಸ್.ಪಿ.ನಾಯ್ಕ ಅವರು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಿಂದ ಬೇವೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

ನಂತರ ಮಾತನಾಡಿದ ಅವರು, ಹುಬ್ಬಳ್ಳಿ ವಿಧ್ಯಾನಗರ,ಹಡಗಲಿ, ಹೊಸಪೇಟೆ ಪಟ್ಟಣ ಮತ್ತು ಅನೇಕ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ.ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಲ್ಲ ಎಂದರು.ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿ ಅಥವಾ ಕರೆ ಮಾಡುವ ಮೂಲಕ ತಿಳಿಸಬೇಕು. 24 ಗಂಟೆಯಲ್ಲೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಸಿದ್ಧವಿದ್ದು, ಅಪರಾಧ ತಡೆಗಟ್ಟುವಲ್ಲಿ ಜನರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.
